ಬಾಗಲಕೋಟೆ- ಮ್ಯೂಸಿಕ್ ಮೈಲಾರಿ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೈಲಾರಪ್ಪ ಸಣ್ಣಕಲಕಪ್ಪ ಮಡಿವಾಳರ (29) ಅಲಿಯಾಸ್ ಮ್ಯೂಸಿಕ್ ಮೈಲಾರಿ ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ.
ಬನಹಟ್ಟಿಯಿಂದ ಕರೆತಂದ ಪೊಲೀಸರು ಆರೋಪಿಯನ್ನು ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ಹಾಜರುಪಡಿಸಿ ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಕಾನೂನು ಪ್ರಕ್ರಿಯೆಯ ಭಾಗವಾಗಿ ಈ ವೈದ್ಯಕೀಯ ತಪಾಸಣೆ ಮಾಡಲಾಗಿದೆ.
ವೈದ್ಯಕೀಯ ಪರೀಕ್ಷೆ ವೇಳೆ ಆರೋಪಿಯಿಂದ ರಕ್ತದ ಮಾದರಿ ಮತ್ತು ಕೂದಲಿನ ಮಾದರಿ ಸಂಗ್ರಹಿಸುವ ಸಾಧ್ಯತೆ ಇದ್ದು, ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳಿಗಾಗಿ ಆರೋಪಿಯ ಮೈ ಮೇಲಿನ ಬಟ್ಟೆಗಳನ್ನು ವಶಕ್ಕೆ ಪಡೆಯುವ ಸಾಧ್ಯತೆಯೂ ಇದೆ.
ವೈದ್ಯಕೀಯ ತಪಾಸಣೆ ಪೂರ್ಣಗೊಂಡ ನಂತರ ಆರೋಪಿಯನ್ನು ಬಾಗಲಕೋಟೆಯ ವಿಶೇಷ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.

