ಮಂಗಳೂರು- ಕಾಂತಾರ ಚಾಪ್ಟರ್ 1 ಸಿನಿಮಾದ ಭರ್ಜರಿ ಯಶಸ್ಸಿನ ಬೆನ್ನಲ್ಲೇ ಹರಕೆ ತೀರಿಸಲು ಚಿತ್ರತಂಡ ಇಂದು ಮಂಗಳೂರಿಗೆ ಭೇಟಿ ನೀಡಿತು. ಬಾರೆಬೈಲ್ ವರಾಹ ಪಂಜುರ್ಲಿ, ಜಾರಂದಾಯ ಮತ್ತು ಬಂಟ ದೈವಸ್ಥಾನದಲ್ಲಿ ಹರಕೆ ನೇಮ ಮಾಡಲಾಯಿತು. ನಟ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲಂಸ್ ವತಿಯಿಂದ ಹರಕೆ ನೇಮೋತ್ಸವ ನಡೆಯಿತು. ವಾರಾಹಿ ಪಂಜುರ್ಲಿ ದೈವದ ನೇಮದಲ್ಲಿ ಭಾಗಿಯಾದ ಚಿತ್ರತಂಡ ಜೊತೆಗೆ ಪತ್ನಿ ಮಕ್ಕಳ ಜೊತೆ ನೇಮೋತ್ಸವಕ್ಕೆ ರಿಷಬ್ ಶೆಟ್ಟಿ ಬಂದಿದ್ರು.
ನೇಮೋತ್ಸವ ಸಂದರ್ಭದಲ್ಲಿ ಚಿತ್ರದ ನಿರ್ಮಾಪಕ ನಿರ್ಮಾಪಕ ವಿಜಯ್ ಕಿರಂಗದೂರು, ನಿರ್ದೇಶಕ ಸಂತೋಷ್ ಆನಂದ ರಾಮ್ ಸೇರಿದಂತೆ ಚಿತ್ರರಂಗದ ಹಲವು ಭಾಗಿಯಾಗಿದ್ದರು. ಗಗ್ಗರ ಸೇವೆ ಜೊತೆಗೆ ಅನ್ನಸಂತರ್ಪಣೆ ಕಾರ್ಯವನ್ನು ಚಿತ್ರ ತಂಡ ಮಾಡಿತು. ಕಳೆದ ಎಪ್ರಿಲ್ ನಲ್ಲಿ ಇದೇ ದೈವಸ್ಥಾನದ ನೇಮೋತ್ಸವದಲ್ಲಿ ಭಾಗಿಯಾಗಿದ್ದ ರಿಷಬ್ ಶೆಟ್ಟಿ ಹಾಗೂ ಕುಟುಂಬ. ಮಗನ ಹುಟ್ಟುಹಬ್ಬದ ದಿನ ಬಾರೆಬೈಲು ದೇವಸ್ಥಾನಕ್ಕೆ ಆಗಮಿಸಿದ್ದ ರಿಷಬ್ ಶೆಟ್ಟಿ. ಇಂದು ಕಾಂತಾರ ಸಿನಿಮಾದ ಯಶಸ್ಸಿನ ಬೆನ್ನಲ್ಲೇ ಅದೇ ದೇವಸ್ಥಾನದಲ್ಲಿ ರಿಷಬ್ ಹರಕೆ ಸಲ್ಲಿಕೆ ಮಾಡಿದ್ರು.

