
ಚಿಕ್ಕಮಗಳೂರು- ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವಕ್ಕಾಗಿ ಹಲವು ಬೆಳವಣಿಗೆ ನಡೆಯುತ್ತಿವೆ. ಈ ನಡುವೆ ಅನೇಕ ಮಠಾದೀಶರು ಕೂಡ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಪರ ಬ್ಯಾಟ್ ಬೀಸುತ್ತಿದ್ದಾರೆ. ಆದರೇ ಯಾವ ಸ್ವಾಮೀಜಿ ಏನಾದ್ರು ಮಾತನಾಡಲಿ, ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ರಂಭಾಪುರಿ ಜಗದ್ಗುರು ಡಾ. ವೀರಸೋಮೇಶ್ವರ ಶ್ರೀಗಳು ಹೇಳಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ರಂಭಾಪುರಿಯಲ್ಲಿ ಇರೋ ಮಠದಲ್ಲಿ ಮಾಧ್ಯಮ ಪ್ರತಿನಿಧಿಗಳು ಮಾತನಾಡಿಸುವ ಪ್ರಯತ್ನ ಮಾಡಿದ್ರು. ಆದರೆ ಇದಕ್ಕೆ ಉತ್ತರಿಸಿದ ಶ್ರೀಗಳು, ಯಾವ ಸ್ವಾಮಿಗಳು ಏನಾದರೂ ಮಾತನಾಡಲಿ, ನಾನು ಮಾತನಾಡುವುದಿಲ್ಲ. ನಾನು ರಾಜಕೀಯ ಮಾತನಾಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
