ಬೆಳಗಾವಿಯ ಸುವರ್ಣ ಸೌಧದ ಸುತ್ತಮುತ್ತ ನಾಳೆಯಿಂದಲೇ ನಿಷೇಧಾಜ್ಞೆ ಜಾರಿ!

Letest Post ಬೆಳಗಾವಿ ರಾಜಕೀಯ

ಬೆಳಗಾವಿ- ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಇದೇ ಡಿಸೆಂಬರ್ 8ರಿಂದ 21ರ ವರೆಗೆ ಚಳಿಗಾಲದ ಅಧಿವೇಶನಕ್ಕೆ ಈಗಾಗಲೇ ಮೂಹುರ್ತ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ನಾಳೆಯಿಂದಲೇ ಸುವರ್ಣ ಸೌಧದ ಸುತ್ತಮುತ್ತ ಮೂರು ಕಿ ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಭೂಷಣ್ ಗುಲಾಬರಾವ್ ಬೊರಸೆ ಆದೇಶ ಹೊರಡಿಸಿದ್ದಾರೆ.

ಬೆಳಗಾವಿಯ ಅಧಿವೇಶನ ಸಂದರ್ಭದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ವಿವಿಧ ಸಂಘ- ಸಂಸ್ಥೆಗಳು ರೆಡಿಯಾಗಿವೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ನಗರ ಪೊಲೀಸ್ ಆಯುಕ್ತರು ನಾಳೆಯಿಂದಲೇ ಡಿಸೆಂಬರ್ 21ರ ವರೆಗೆ ಸುವರ್ಣ ಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಸುವರ್ಣ ಸೌಧದ ಸುತ್ತಮುತ್ತ 3ಕಿ ಮೀ ವ್ಯಾಪ್ತಿಯಲ್ಲಿ ಈ ಆದೇಶ ಜಾರಿಯಲ್ಲಿ ಇರುತ್ತದೆ. 5ಕ್ಕಿಂತ ಹೆಚ್ಚು ಜನ ಸೇರಿ ಪ್ರತಿಭಟನೆ ಮಾಡೋದು, ಪ್ರತಿಭಟನೆ ಮಾಡಲು ಪೂರ್ವಾನುಮತಿ ಕಡ್ಡಾಯ ಎಂದು ಆದೇಶ ಹೊರಡಿಸಿದೆ.

ಬೆಳಗಾವಿ ಸುವರ್ಣ ಸೌಧ

ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ಮುಂದಾದ್ರೆ ಕೇಸ್ ಎಂದು ಎಚ್ಚರಿಕೆ ನೀಡಲಾಗಿದೆ. ಅಧಿವೇಶನ ಸಂದರ್ಭದಲ್ಲಿ ಡ್ರೋನ್ ಬಳಕೆಗೂ ಅನುಮತಿ ಕಡ್ಡಾಯವಾಗಿದೆ. ಕಬ್ಬು ಬೆಳೆಗಾರರು, ಅತಿವೃಷ್ಟಿಯಿಂದ ಬೆಳೆ ಹಾನಿ, ವಿವಿಧ ಕಾರ್ಮಿಕ ಸಂಘಟನೆಗಳು, ಉಪನ್ಯಾಸಕರು. ಉತ್ತರ ಕರ್ನಾಟಕ ವಿಕಾಸ ವೇದಿಕೆ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಸೇರಿ ಹಲವು ಸಂಘಟನೆಗಳಿಂದ ಪ್ರತಿಭಟನೆ ಮಾಡಲು ತೀರ್ಮಾನ ಮಾಡಲಾಗಿದೆ.