ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರ್- ಲೋಕಾಯುಕ್ತ ಇನ್ಸಪೆಕ್ಟರ್ ಸಜೀವ ದಹನ!

Letest Post ಕ್ರೈಂ

ಧಾರವಾಡ- ರಸ್ತೆ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ಬೆಂಕಿ ಹೊತ್ತಿದ್ದು, ಕಾರಿನಲ್ಲಿ ಇದ್ದ ಲೋಕಾಯುಕ್ತ ಇನ್ಸಪೆಕ್ಟರ್ ಸಜೀವ ದಹನ ಆಗಿದ್ದಾರೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ಬಳಿಯ ಭದ್ರಾಪುರ ಕ್ರಾಸ್ ನಲ್ಲಿ ಘಟನೆ ನಡೆದಿದೆ. ಹಾವೇರಿ ಲೋಕಾಯುಕ್ತ ಇನ್ಸಪೆಕ್ಟರ್ ಸಾಲಿಮಠ ಸ್ಥಳದಲ್ಲಿಯೇ ಸಜೀವ ದಹನವಾಗಿದ್ದು, ಕಾರಿನಲ್ಲಿ ಇದ್ದವರ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಗದಗ ನಗರದಿಂದ ರಸ್ತೆ ಮಾರ್ಗವಾಗಿ ಹುಬ್ಬಳ್ಳಿಗೆ ಬರುತ್ತಿದ್ದ ವೇಳೆ ದುರಂತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯ ಮೇಲೆ ಐ-20 ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ರಸ್ತೆ ಪಕ್ಕಕ್ಕೆ ಬಿದ್ದಿದ್ದು, ಬೆಂಕಿ ಹೊತ್ತಿಕೊಂಡಿದೆ. ಸಾಲಿಮಠ ಜೊತೆಗೆ ಕಾರಿನಲ್ಲಿ ಯಾರು ಇದ್ರು ಎಂಬುದು ಇನ್ನೂ ಗೊತ್ತಾಗಿಲ್ಲ. ಸಾಲಿಮಠ ಮೃತದೇಹ ಸಂಪೂರ್ಣವಾಗಿ ಸುಟ್ಟು ಕರಲಾಗಿದೆ. ಇನ್ನೂ ಸ್ಥಳಕ್ಕೆ ಅಗ್ನಿಶಾಮಕ ಹಾಗೂ ಅಣ್ಣಿಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.