ದೇವರಾಜು ಅರಸು ದಾಖಲೆ ಸರಿಗಟ್ಟಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಮಹತ್ವದ ದಾಖಲೆಯೊಂದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹೆಸರಿನಲ್ಲಿ ಬರೆಯಿಸಿಕೊಂಡಿದ್ದಾರೆ. ದೀರ್ಘಕಾಲ ಮುಖ್ಯಮಂತ್ರಿ ಸ್ಥಾನದಲ್ಲಿ ಕಾರ್ಯನಿರ್ವಹಿಸಿದ್ದ ಮಾಜಿ ಸಿಎಂ ದೇವರಾಜು ಅರಸು ಅವರ ಆಡಳಿತಾವಧಿ ದಾಖಲೆಯನ್ನು ಸಿದ್ದರಾಮಯ್ಯ ಅವರು ಇದೀಗ ಸರಿಗಟ್ಟಿದ್ದಾರೆ.1972ರಿಂದ 1977ರವರೆಗೆ ನಿರಂತರವಾಗಿ ಐದು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿದ್ದ ದೇವರಾಜು ಅರಸು ಅವರು ಸಾಮಾಜಿಕ ನ್ಯಾಯ, ಭೂಸಂಸ್ಕರಣೆ ಮತ್ತು ಹಿಂದುಳಿದ ವರ್ಗಗಳ ಮೀಸಲಾತಿಯ ಮೂಲಕ ರಾಜ್ಯ ರಾಜಕೀಯದಲ್ಲಿ ಇತಿಹಾಸ ನಿರ್ಮಿಸಿದ್ದರು. ಆ ದಾಖಲೆಗೆ ಇದೀಗ ಸಿದ್ದರಾಮಯ್ಯ ಅವರ ಆಡಳಿತಾವಧಿ […]

ಮತ್ತಷ್ಟು ಓದಿ

PSIಗೆ ಕಪಾಳಮೋಕ್ಷ ಮಾಡಿದ ಸ್ವಾಮೀಜಿ ಪೊಲೀಸ್ ವಶ

ವಿಜಯಪುರ-  ಸರ್ಕಾರಿ ಮೆಡಿಕಲ್ ಕಾಲೇಜು ವಿರೋಧಿಸಿ ನಡೆದ ಹೋರಾಟದ ವೇಳೆ ವಿಜಯಪುರದಲ್ಲಿ ಅಹಿತಕರ ಘಟನೆ ನಡೆದಿದೆ. ಸಚಿವ ಎಂಬಿ ಪಾಟೀಲ್ ನಿವಾಸದ ಬಳಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸ್ವಾಮೀಜಿ ಹಾಗೂ ಪೊಲೀಸರ ನಡುವೆ ಗಲಾಟೆ ನಡೆದಿದೆ.ಪ್ರತಿಭಟನೆಯ ಸಮಯದಲ್ಲಿ ಪೊಲೀಸರ ಮೊಬೈಲ್‌ಫೋನ್ ಕಸಿದುಕೊಂಡ ಘಟನೆಗೆ ಆಕ್ರೋಶಗೊಂಡ ಸ್ವಾಮೀಜಿ, ಪಿಎಸ್ಐಗೆ ಕಪಾಳ ಮೋಕ್ಷ ಮಾಡಿದ ಘಟನೆ ನಡೆದಿದೆ. ಸಂಗನಬಸವೇಶ್ವರ ಸ್ವಾಮೀಜಿ ಅವರು ಪಿಎಸ್ಐ ಸೀತಾರಾಮ ಲಮಾಣಿ ಅವರಿಗೆ ಕಪಾಳ ಮೋಕ್ಷ ಮಾಡಿದ ಆರೋಪ ಕೇಳಿಬಂದಿದೆ.ಕಪಾಳ ಮೋಕ್ಷ ಮಾಡಿದ ಸ್ವಾಮೀಜಿ ಬಸವನಬಾಗೇವಾಡಿ […]

ಮತ್ತಷ್ಟು ಓದಿ

ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಳಗಾವಿ- ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿಗೆ ಸೇರಿದ ಕಾರು ಅಪಘಾತಕ್ಕೀಡಾದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪಘಾತದಲ್ಲಿ ಸವದತ್ತಿ ಪಟ್ಟಣದ ನಿವಾಸಿ ಮಂಜುನಾಥ್ ಬೈರ್ನಟ್ಟಿ (30) ಮೃತಪಟ್ಟಿದ್ದಾನೆ. ಮಂಜುನಾಥ್ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ಹೊರಟಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮಂಜುನಾಥ್ ತಲೆಗೆ ಗಂಭೀರ ಗಾಯಗಳಾಗಿ […]

ಮತ್ತಷ್ಟು ಓದಿ

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್- ಐಪಿಎಲ್ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ ನಡೆಯುವ ಸಾಧ್ಯತೆ – ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್

ಮೈಸೂರು- ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯವನ್ನು ಬೆಂಗಳೂರಿನಲ್ಲಿ ನಡೆಸುವ ಕುರಿತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಜೊತೆಗೆ ಈಗಾಗಲೇ ಮಾತುಕತೆ ನಡೆಸಲಾಗಿದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಅಧ್ಯಕ್ಷ ವೆಂಕಟೇಶ್ ಪ್ರಸಾದ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, “ಬಿಸಿಸಿಐ ಕೂಡ ಈ ಬಾರಿ ಐಪಿಎಲ್ ಉದ್ಘಾಟನಾ ಪಂದ್ಯವನ್ನು ಬೆಂಗಳೂರಿನಲ್ಲಿ ನಡೆಸುವ ಬಗ್ಗೆ ಚರ್ಚೆ ನಡೆಸುತ್ತಿದೆ. ಪ್ರತಿವರ್ಷ ಐಪಿಎಲ್ ಟ್ರೋಫಿ ಗೆದ್ದ ತಂಡದ ಹೋಂ ಗ್ರೌಂಡ್‌ನಲ್ಲೇ […]

ಮತ್ತಷ್ಟು ಓದಿ

ಗೋವಾ–ನವದೆಹಲಿ ವಿಮಾನದಲ್ಲಿ ಜೀವ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್

ಗೋವಾ–ನವದೆಹಲಿ ನಡುವಿನ ವಿಮಾನ ಪ್ರಯಾಣದ ವೇಳೆ ಖಾನಾಪುರದ ಮಾಜಿ ಶಾಸಕಿ ಹಾಗೂ ಎಐಸಿಸಿ ಗೋವಾ ಪ್ರಭಾರಿ ಕಾರ್ಯದರ್ಶಿಯಾಗಿರುವ ಡಾ. ಅಂಜಲಿ ನಿಂಬಾಳ್ಕರ್ ಅವರು ತುರ್ತು ವೈದ್ಯಕೀಯ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಿ ಯುವ ಅಮೆರಿಕನ್ ಮಹಿಳೆಯೊಬ್ಬರ ಪ್ರಾಣವನ್ನು ಉಳಿಸಿದ್ದಾರೆ. ಗೋವಾದಿಂದ ನವದೆಹಲಿಗೆ ಹೊರಟ ತಕ್ಷಣವೇ ಆ ಯುವತಿ ತೀವ್ರವಾಗಿ ನಡುಗತೊಡಗಿ ಅಚೇತನಗೊಂಡಿದ್ದು, ನಾಡಿ ಕೂಡ ನಿಲ್ಲುವ ಹಂತಕ್ಕೆ ತಲುಪಿತ್ತು. ಈ ಸಂದರ್ಭದಲ್ಲಿ ತಕ್ಷಣ ಸ್ಪಂದಿಸಿದ ಡಾ. ಅಂಜಲಿ ಅವರು ಕಾರ್ಡಿಯೋ–ಪಲ್ಮನರಿ ರಿಸಸ್ಸಿಟೇಶನ್ (ಸಿಪಿಆರ್) ನಡೆಸಿ ಯುವತಿಗೆ ಜೀವ ತುಂಬಿದರು. […]

ಮತ್ತಷ್ಟು ಓದಿ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲು ಕ್ರಮ: ಸಚಿವ ಜಿ.ಪರಮೇಶ್ವರ

ಬೆಳಗಾವಿ– ದರೋಡೆ, ಕಳ್ಳತನ ಮತ್ತು ಸುಲಿಗೆ ಪ್ರಕರಣಗಳನ್ನು ಹತ್ತಿಕ್ಕಲು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಹೇಳಿದರು. ಪರಿಷತ್ತಿನಲ್ಲಿ ಡಿ.11ರಂದು ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ವಾಹನ ಕಳವು ಪ್ರಕರಣಗಳನ್ನು ನಿಯಂತ್ರಿಸಲು ಹಾಗೂ ಬಾಕಿ ಇರುವ ಪ್ರಕರಣಗಳನ್ನು ಪತ್ತೆ ಹಚ್ಚಲು ನಾನಾ ಕ್ರಮ ತೆಗೆದುಕೊಳ್ಳಲಾಗಿದೆ. ವಾಹನ ಕಳವು ಪ್ರಕರಣಗಳನ್ನು ನಿಯಂತ್ರಿಸುವ ಉದ್ದೇಶದಿಂದ, ಸಂಘಟಿತ ವಾಹನ ಕಳವು ಅಪರಾಧಗಳಲ್ಲಿ ಭಾಗಿಯಾಗಿರುವ ಆರೋಪಿಗಳ […]

ಮತ್ತಷ್ಟು ಓದಿ

ಅಧಿವೇಶನದಲ್ಲಿ ರೈತರ ಸಮಸ್ಯೆ, ಬೆಂಬಲ ಬೆಲೆ, ಬಾಕಿ ಹಣ ಬಿಡುಗಡೆ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವ ಬಗ್ಗೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ- “ರೈತರ ಸಮಸ್ಯೆ, ಬೆಂಬಲ ಬೆಲೆ, ಬಾಕಿ ಹಣ ಬಿಡುಗಡೆ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವುದು ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. ಚಳಿಗಾಲದ ಅಧಿವೇಶನದ ಬಗ್ಗೆ ಕೇಳಿದಾಗ, “ಆಡಳಿತ ಪಕ್ಷ, ವಿರೋಧ ಪಕ್ಷ ಸೇರಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುವ ವಿಶ್ವಾಸವಿದೆ. ರೈತರ ಸಮಸ್ಯೆ […]

ಮತ್ತಷ್ಟು ಓದಿ

ನನ್ನ ದುಡ್ಡಿನಲ್ಲಿ ಎಷ್ಟು ಬೇಕಾದರೂ ವಾಚ್ ತೆಗೆದುಕೊಳ್ಳುವ ಶಕ್ತಿ ನನಗೆ ಇದೆ – ಡಿಕೆಶಿ ಟಾಂಗ್!

ಹಾಸನ- ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಬ್ರೇಕ್‌ಫಾಸ್ಟ್ ಮೀಟಿಂಗ್ ವೇಳೆ ಧರಿಸಿದ್ದ ವಾಚ್ ಬಗ್ಗೆ ವ್ಯಾಪಕ ಚರ್ಚೆ ನಡೆದಿತ್ತು. ವಿರೋಧ ಪಕ್ಷಗಳು ಸಹ ಇದರ ಬಗ್ಗೆ ಧ್ವನಿ ಎತ್ತಿದ್ದವು. ಈ ಬಗ್ಗೆ ಹಾಸನದಲ್ಲಿ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಎಷ್ಟು ಬೇಕಾದರೂ ವಾಚ್ ತೆಗೆದುಕೊಳ್ಳುವ ಶಕ್ತಿ ನನಗೆ ಇದೆ. ಯಾರ ಪ್ಯಾಂಟ್ ಹಾಕ್ತಾರೆ, ಯಾರು ವಾಚ್ ಹಾಕ್ತಾರೆ, ಯಾರು ಕನ್ನಡಕ ಹಾಕ್ತಾರೆ ಎಂದು ಪ್ರಶ್ನೆ ಮಾಡಲು ನಾನು ಹೋಗಲ್ಲ. ಅದು ಅವರ […]

ಮತ್ತಷ್ಟು ಓದಿ

ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿ ಬ್ಯಾನರ್ ವಿವಾದ: ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ

ಚಿಕ್ಕಮಗಳೂರು: ದತ್ತ ಜಯಂತಿ ಬ್ಯಾನರ್ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಭಜರಂಗ ದಳದ ಕಾರ್ಯಕರ್ತರ ನಡುವೆ ನಡೆದ ಗಲಾಟೆ ರೌಡಿಗೇರಿದ್ದು, ಕಾಂಗ್ರೆಸ್ ಕಾರ್ಯಕರ್ತ ಗಣೇಶ್ (40) ಮಚ್ಚಿನ ದಾಳಿಯಲ್ಲಿ ಸಾವಿಗೀಡಾದ ಘಟನಾ ಸಖರಾಯಪಟ್ಟಣದಲ್ಲಿ ನಡೆದಿದೆ. ಘಟನೆ ಕಲ್ಮುರುಡೇಶ್ವರ ಮಠದ ಬಳಿಯಲ್ಲಿ ರಾತ್ರಿ ವೇಳೆ ನಡೆದಿದ್ದು, ದತ್ತ ಜಯಂತಿಗೆ ಶುಭಕೋರಲು ಬ್ಯಾನರ್ ಹಾಕುವ ವಿಷಯದ ಕುರಿತಾದ ವಿವಾದವೇ ಜಗಳಕ್ಕೆ ಕಾರಣವಾಗಿರುವುದಾಗಿ ಮೂಲಗಳು ತಿಳಿಸಿವೆ. ಬಾರ್ ಪ್ರದೇಶದ ಬಳಿ ಎರಡೂ ಗುಂಪುಗಳ ನಡುವೆ ಮೊದಲ ಗಲಾಟೆ ನಡೆದಿದ್ದು, ನಂತರ […]

ಮತ್ತಷ್ಟು ಓದಿ

ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರ್- ಲೋಕಾಯುಕ್ತ ಇನ್ಸಪೆಕ್ಟರ್ ಸಜೀವ ದಹನ!

ಧಾರವಾಡ- ರಸ್ತೆ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ಬೆಂಕಿ ಹೊತ್ತಿದ್ದು, ಕಾರಿನಲ್ಲಿ ಇದ್ದ ಲೋಕಾಯುಕ್ತ ಇನ್ಸಪೆಕ್ಟರ್ ಸಜೀವ ದಹನ ಆಗಿದ್ದಾರೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ಬಳಿಯ ಭದ್ರಾಪುರ ಕ್ರಾಸ್ ನಲ್ಲಿ ಘಟನೆ ನಡೆದಿದೆ. ಹಾವೇರಿ ಲೋಕಾಯುಕ್ತ ಇನ್ಸಪೆಕ್ಟರ್ ಸಾಲಿಮಠ ಸ್ಥಳದಲ್ಲಿಯೇ ಸಜೀವ ದಹನವಾಗಿದ್ದು, ಕಾರಿನಲ್ಲಿ ಇದ್ದವರ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಗದಗ ನಗರದಿಂದ ರಸ್ತೆ ಮಾರ್ಗವಾಗಿ ಹುಬ್ಬಳ್ಳಿಗೆ ಬರುತ್ತಿದ್ದ ವೇಳೆ ದುರಂತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯ ಮೇಲೆ ಐ-20 ಕಾರು ಡಿವೈಡರ್ ಗೆ ಡಿಕ್ಕಿ […]

ಮತ್ತಷ್ಟು ಓದಿ